ಪ್ರೇಮ ವೈಫಲ್ಯ: ಬ್ಯಾಂಕ್ ಆಡಿಟರ್ ಆತ್ಮಹತ್ಯೆ

Update: 2020-07-11 18:36 GMT

ಶಿವಮೊಗ್ಗ, ಜು.11: ಪ್ರೇಮ ವೈಫಲ್ಯದ ಹಿನ್ನೆಲೆ ಫೈನಾನ್ಸ್ ಬ್ಯಾಂಕ್ ಒಂದರ ಆಡಿಟರ್ ಒಬ್ಬರು ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಚಿನ್ (24) ಆತ್ಮಹತ್ಯೆ ಮಾಡಿಕೊಂಡವರು. ಶಿವಮೊಗ್ಗದ ಜಯನಗರದಲ್ಲಿ ಬಾಡಿಗೆ ರೂಂ ಮಾಡಿಕೊಂಡು ವಾಸವಾಗಿದ್ದ ಸಚಿನ್, ಅದೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಚಿನ್ ಪ್ರೀತಿಸುತ್ತಿದ್ದ ಯುವತಿಗೆ ಇತ್ತೀಚೆಗಷ್ಟೇ ಮದುವೆಯಾಗಿತ್ತು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಸಚಿನ್, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News