ಅಭಿಷೇಕ್ ಬಚ್ಚನ್‌ಗೂ ಕೊರೋನ ಪಾಸಿಟಿವ್; ಐಶ್ವರ್ಯಾ ನೆಗೆಟಿವ್

Update: 2020-07-12 03:43 GMT

ಮುಂಬೈ, ಜು.12: ಬಿಗ್-ಬಿ ಅಮಿತಾಬ್ ಬಚ್ಚನ್ ಅವರಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢಪಟ್ಟ ಬೆನ್ನಲ್ಲೇ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೂ ಸೋಂಕು ದೃಢಪಟ್ಟಿದೆ. ಆದರೆ ಅವರ ಪತ್ನಿ ಐಶ್ವರ್ಯಾ ರೈ ಬಚ್ಚನ್ ಅವರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.

ನನಗೆ ಹಾಗೂ ತಂದೆಗೆ ಕೊರೋನ ವೈರಸ್ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದಿದೆ ಎಂದು ರಾತ್ರಿ 11:57ಕ್ಕೆ ಸ್ವತಃ ಟ್ವೀಟ್ ಮೂಲಕ ಅಭಿಷೇಕ್ ಬಚ್ಚನ್ ಬಹಿರಂಗಪಡಿಸಿದ್ದಾರೆ. ಇಬ್ಬರಿಗೂ ಅಲ್ಪಪ್ರಮಾಣದ ಲಕ್ಷಣ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿರುವುದಾಗಿ ಹೇಳಿದ್ದಾರೆ. ನಮ್ಮ ಕುಟುಂಬದ ಎಲ್ಲರೂ ಹಾಗೂ ಸಿಬ್ಬಂದಿಗೆ ಕೂಡಾ ಪರೀಕ್ಷೆ ನಡೆಸುವಂತೆ ಅಧಿಕಾರಿಗಳನ್ನು ಕೋರಿದ್ದೇವೆ. ಎಲ್ಲರೂ ಶಾಂತವಾಗಿರಿ; ಭಯಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

1982ರ ಜುಲೈ ಮತ್ತು 2005ರಲ್ಲಿ ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲಾದಾಗಲೂ ಅವರ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದರು. ಕ್ಷಯ ಮತ್ತು ಹೆಪಟೈಟಿಸ್ ಬಿ ಸೇರಿದಂತೆ ತಮ್ಮ ಅಸ್ವಸ್ಥತೆ ಬಗ್ಗೆ ಬಿಗ್-ಬಿ ಮುಕ್ತವಾಗಿ ಹೇಳಿಕೊಂಡಿದ್ದರು.

ಅಮಿತಾಬ್ ಬಚ್ಚನ್ ಅವರ ಆರೋಗ್ಯಸ್ಥಿತಿ ಸ್ಥಿರವಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಸ್ಪಷ್ಟಪಡಿಸಿದ್ದಾರೆ.
ಮಾಜಿ ಕ್ರಿಕೆಟರ್ ಹಾಗೂ ಸದ್ಯ ರಾಜಕಾರಣಿಯಾಗಿರುವ ಚೇತನ್ ಚೌಹಾಣ್ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News