ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಹಾರ್ದಿಕ್ ಪಟೇಲ್ ನೇಮಕ

Update: 2020-07-12 05:02 GMT

ಅಹ್ಮದಾಬಾದ್,ಜು.12: ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್‌ರನ್ನು ಶನಿವಾರ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

 ತಕ್ಷಣವೇ ಜಾರಿಗೆ ಬರುವಂತೆ ಹಾರ್ದಿಕ್ ಪಟೇಲ್‌ರನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರನ್ನಾಗಿ ಮಾಡುವ ಪ್ರಸ್ತಾವಕ್ಕೆ ಕಾಂಗ್ರೆಸ್ ಅಧ್ಯಕ್ಷರು ಅನುಮತಿ ನೀಡಿದ್ದಾರೆ ಎಂದು ಪಕ್ಷದ ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ.

26ರ ಹರೆಯದ ಪಟೇಲ್ 2015ರಲ್ಲಿ ಪಾಟಿದಾರ್ ಸಮುದಾಯಕ್ಕೆ ಸರಕಾರಿ ಉದ್ಯೋಗದಲ್ಲಿ ಹಾಗೂ ಕಾಲೇಜು ಪ್ರವೇಶಾತಿಯಲ್ಲಿ ಮೀಸಲಾತಿ ನೀಡಬೇಕೆಂದು ನಡೆದಿದ್ದ ಬೃಹತ್ ಪ್ರತಿಭಟನೆಯ ನೇತೃತ್ವವಹಿಸುವ ಮೂಲಕ ಬೆಳಕಿಗೆ ಬಂದಿದ್ದರು. 2019ರ ಮಾರ್ಚ್ 12ರಂದು ಪಟೇಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ ಅವರ ಮೇಲೆ ಒಂದು ಪ್ರಕರಣ ವಿದ್ದ ಕಾರಣ ಲೋಕಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಕಾಂಗ್ರೆಸ್ ಸೇರ್ಪಡೆಯಾಗುವ ಮೊದಲು ಲೋಕಸಭೆಯಲ್ಲಿ ಜಾಮ್‌ನಗರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News