ಉಡುಪಿ: ಕೊರೋನ ಸೋಂಕಿತ ಓರ್ವ ವ್ಯಕ್ತಿ ಮೃತ್ಯು

Update: 2020-07-12 05:17 GMT

ಉಡುಪಿ, ಜು.12: ಕೊರೋನ ವೈರಸ್ ಸೋಂಕಿಗೆ ಪಾಸಿಟಿವ್ ಆಗಿದ್ದ ದಾವಣಗೆರೆ ಮೂಲದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೆ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಸುಮಾರು 70 ವರ್ಷದ ದಾವಣಗೆರೆ ಮೂಲದ ವೃದ್ಧರೊಬ್ಬರನ್ನು ಮೂರು ದಿನಗಳ ಹಿಂದೆ ಅನಾರೋಗ್ಯದ ಕಾರಣ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಗಂಟಲದ್ರವದ ಪರೀಕ್ಷೆ ನಡೆಸಿದಾಗ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಜು.10ರಂದು ಉಡುಪಿಯ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂದೇ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೃತರ ಅಂತ್ಯ ಸಂಸ್ಕಾರವು ಕೋವಿಡ್-19 ಮಾರ್ಗಸೂಚಿ ಪ್ರಕಾರ ಉಡುಪಿಯಲ್ಲಿ ನೆರವೇರಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News