ಮಂಗಳೂರು ಮನಪಾ ಆಯುಕ್ತರಿಗೆ ಕೊರೋನ ಪಾಸಿಟಿವ್

Update: 2020-07-12 06:00 GMT

ಮಂಗಳೂರು, ಜು.12: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ರವಿವಾರ ದೃಢಪಟ್ಟಿದೆ.

ಎರಡು ದಿನಗಳ ಹಿಂದೆ ಅವರಲ್ಲಿ ಜ್ವರದ ಲಕ್ಷಣ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ  ಗಂಟಲು ದ್ರವ ಮಾದರಿಯನ್ನು ವೈದ್ಯ ಸಿಬ್ಬಂದಿ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಬಂದ ವರದಿಯಲ್ಲಿ ಕೊರೋನ ಪಾಸಿಟಿವ್ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಯುಕ್ತರ ಆರೋಗ್ಯ ಉತ್ತಮ ಸ್ಥಿತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News