ಮೈಸೂರು: ಕೊರೋನ ಸೋಂಕಿಗೆ ಇಂದು ಐದು ಮಂದಿ ಸಾವು

Update: 2020-07-12 14:02 GMT

ಮೈಸೂರು,ಜು.12: ಮೈಸೂರಿನಲ್ಲಿ ಕೊರೋನ ಸಾವಿನ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ರವಿವಾರ ಕೊರೋನ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ.

ಅರಮನೆ ನಗರಿ ಮೈಸೂರಿನಲ್ಲಿ ಕೆಲ ದಿನಗಳಿಂದ ಕೊರೋನ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಇಂದು 5 ಮಂದಿ ಸಾವನ್ನಪ್ಪಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು 33 ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ.

ಕೊರೋನ ಸೋಂಕಿನಿಂದ ಶನಿವಾರ ಒಂದೇ ದಿನ 8 ಮಂದಿ ಸಾವನ್ನಪ್ಪಿದ್ದರು. ಇಂದು ಐವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಜೊತೆಗೆ ಸೋಂಕಿತರ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದ್ದು, ಜನ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಸದ್ಯ ಸೋಂಕಿನ ಸಕ್ರಿಯ ಪ್ರಕರಣಗಳು 400ರ ಸನಿಹದಲ್ಲಿದೆ. ಒಟ್ಟು ಸೋಂಕಿತರ ಸಂಖ್ಯೆ 800ಕ್ಕಿಂತ ಹೆಚ್ಚು ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News