ಕೊರೋನ ನಿಯಂತ್ರಣ: ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸಿದವರಿಂದ 1 ಕೋಟಿ ರೂ. ಗೂ ಅಧಿಕ ದಂಡ ವಸೂಲಿ

Update: 2020-07-12 14:07 GMT

ಬೆಂಗಳೂರು, ಜು.12: ರಾಜಧಾನಿಯಲ್ಲಿ ಕೊರೋನ ಸೋಂಕಿನ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ ನಿಯಮಗಳನ್ನು ಉಲ್ಲಂಘನೆ ಮಾಡಿದವರಿಂದ ಇದುವರೆಗೂ 1 ಕೋಟಿಗೂ ಅಧಿಕ ಮೊತ್ತ ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ಮಾಸ್ಕ್ ಧರಿಸಬೇಕು. ಜನರಿಂದ ಅಂತರ ಕಾಯ್ದುಕೊಳ್ಳಬೇಕು. ಗ್ರಾಹಕರು ಅಂತರ ಕಾಪಾಡಿಕೊಂಡು ಸರದಿಯಲ್ಲಿ ನಿಂತು ಸಾಮಗ್ರಿ ಖರೀದಿಸಲು ಅನುವಾಗುವಂತೆ ಮಳಿಗೆಗಳಲ್ಲಿ ಸ್ಥಳ ಗುರುತು ಮಾಡಬೇಕು. ಆದರೆ ಈ ನಿಯಮಗಳನ್ನು ಹಲವರು ಉಲ್ಲಂಘಿಸುತ್ತಿದ್ದಾರೆ. ಅಂತವರನ್ನು ಪತ್ತೆ ಹಚ್ಚಿ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ದಂಡ ವಿಧಿಸುತ್ತಿದ್ದಾರೆ.

ಜೂನ್ 9ರಿಂದ ಇದುವರೆಗೆ ನಡೆದಿರುವ ಕಾರ್ಯಾಚರಣೆಯಲ್ಲಿ, ನಿಯಮ ಉಲ್ಲಂಘಿಸಿದ್ದವರ ವಿರುದ್ಧ ಒಟ್ಟು 50,706 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದರ ಜೊತೆಯೇ 149 ಅಂಗಡಿಗಳನ್ನೂ ಬಂದ್ ಮಾಡಿಸಲಾಗಿದೆ. ಮಾಸ್ಕ್ ಧರಿಸದಿದ್ದಕ್ಕೆ ಹಾಗೂ ಅಂತರ ಕಾಯ್ದುಕೊಳ್ಳದಿದ್ದಕ್ಕೆ ಪ್ರತ್ಯೇಕವಾಗಿ ದಂಡ ವಿಧಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ಕಮಿಷನರ್(ಆಡಳಿತ) ಹೇಮಂತ್ ನಿಂಬಾಳ್ಕರ್, ದಂಡದ ಮೊತ್ತ 1 ಕೋಟಿ ದಾಟಿದೆ. ಇದು ಸಾಧನೆಯೆಂದು ನಾವು ಹೇಳುವುದಿಲ್ಲ. ಆರೋಗ್ಯಕ್ಕಾಗಿ ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕು. ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News