Breaking News: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಲ್ಲ: ಸಚಿನ್ ಪೈಲಟ್

Update: 2020-07-12 16:58 GMT

ಹೊಸದಿಲ್ಲಿ: ರಾಜಸ್ಥಾನದಲ್ಲಿ ರಾಜಕೀಯ ಹೈಡ್ರಾಮ ನಡೆಯುತ್ತಿರುವ ನಡುವೆಯೇ ಹೇಳಿಕೆ ನೀಡಿರುವ ಡಿಸಿಎಂ ಸಚಿನ್ ಪೈಲಟ್ ಜುಲೈ 13ರಂದು ನಿಗದಿಯಾಗಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ತಾನು ಭಾಗವಹಿಸುವುದಿಲ್ಲ ಎಂದಿದ್ದಾರೆ.

ಈ ಬಗ್ಗೆ ಸಚಿನ್ ಅವರ ಕಚೇರಿ ಪ್ರಕಟನೆಯೊಂದನ್ನು ಹೊರಡಿಸಿದ್ದು, ಜುಲೈ 13ರ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಲಾಗಿದೆ. ಈ ಬಗ್ಗೆ ಸ್ವತಃ ಹೇಳಿಕೆ ನೀಡಿರುವ ಸಚಿನ್ ಪೈಲಟ್ ತಾನು ಗೈರಾಗುವುದನ್ನು ದೃಢಪಡಿಸಿದ್ದಾರೆ ಎಂದು ವರದಿ ಮಾಡಿದೆ.

“ನಾನು ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸುವುದಿಲ್ಲ.  30 ಶಾಸಕರು ನನ್ನ ಬೆಂಬಲಕ್ಕಿದ್ದಾರೆ. ಅಶೋಕ್ ಗೆಹ್ಲೋಟ್ ಸರಕಾರದಲ್ಲಿ ಶಾಸಕರಿಲ್ಲ  ” ಎಂದು ಹೇಳಿರುವ ಸಚಿನ್ ಪೈಲಟ್ ತಾನು ಜೈಪುರಕ್ಕೆ ಹೋಗುವುದಿಲ್ಲ ಎನ್ನುವುದನ್ನೂ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News