ಶಿವಮೊಗ್ಗ: ಒಂದೇ ದಿನ 56 ಮಂದಿಗೆ ಕೊರೋನ ಪಾಸಿಟಿವ್, ಇಬ್ಬರು ಸಾವು

Update: 2020-07-12 18:07 GMT

ಶಿವಮೊಗ್ಗ, ಜು.12: ಸಾಕಷ್ಟು ಮುಂಜಾಗ್ರತಾ ಕ್ರಮಗಳ ಬಳಿಕವೂ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ರವಿವಾರ ಒಂದೇ ದಿನ 56 ಮಂದಿಗೆ ಪಾಸಿಟಿವ್ ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 541 ಪಾಸಿಟಿವ್ ಪ್ರಕರಣಗಳು ಬಂದಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ರವಿವಾರ 170 ಸೇರಿ ಇದುವರೆಗೆ 20,945 ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ಪೈಕಿ, 218 ಸೇರಿ 19,146 ಮಾದರಿಗಳು ನೆಗೆಟಿವ್ ಬಂದಿವೆ. ರವಿವಾರ 18 ಮಂದಿ ಗುಣಮುಖರಾಗಿದ್ದು, ಒಟ್ಟು 198 ಜನರನ್ನು ಬಿಡುಗಡೆ ಮಾಡಲಾಗಿದೆ.

ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ 144, ಕೋವಿಡ್ ಕೇರ್ ಸೆಂಟರ್‌ನಲ್ಲಿ 182 ಮತ್ತು ಖಾಸಗಿ ಆಸ್ಪತ್ರೆಯಲ್ಲಿ 8 ಸೇರಿ ಒಟ್ಟು 334 ಸಕ್ರಿಯ ಕೊರೋನ ಪ್ರಕರಣಗಳಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದಲ್ಲಿ 18 ಕಂಟೈನ್‌ಮೆಂಟ್ ಝೋನ್‌ಗಳನ್ನು ಕೈಬಿಡಲಾಗಿದ್ದು, ಪ್ರಸಕ್ತ 124 ಝೋನ್‌ಗಳಿವೆ.

16 ಮಂದಿಗೆ ಶೀತ, ಕೆಮ್ಮು, ಜ್ವರದ ಲಕ್ಷಣಗಳಿದ್ದು, 15 ಜನರಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ. ಅಂತರ್ ಜಿಲ್ಲಾ ಪ್ರವಾಸ ಮಾಡಿರುವ ಏಳು ಜನರಿಗೆ ಕೊರೋನ ಪಾಸಿಟಿವ್ ಬಂದಿದೆ. ನಾಲ್ವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಆದರೂ ಸೋಂಕು ತಗಲಿದ್ದು, ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News