ಮೂರನೇ ಬಾರಿಗೆ ಕೊರೋನ ಟೆಸ್ಟ್‌ಗೆ ಒಳಗಾಗಿದ್ದ ಸಚಿವ ಸಿ.ಟಿ. ರವಿಗೆ ಸೋಂಕು ದೃಢ

Update: 2020-07-13 05:18 GMT

ಚಿಕ್ಕಮಗಳೂರು, ಜು.13: ಮೂರನೇ ಬಾರಿಗೆ ಕೊರೋನ ಟೆಸ್ಟ್‌ಗೆ ಒಳಗಾಗಿದ್ದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರಿಗೆ ಕೊರೋನ ಪಾಸಿಟಿವ್ ಬಂದಿದೆ.

ಸಿ.ಟಿ. ರವಿ ಅವರು ಒಂದು ವಾರದಲ್ಲಿ ಎರಡು ಬಾರಿ ಕೊರೋನ ಟೆಸ್ಟ್ ಮಾಡಿಸಿಕೊಂಡಿದ್ದರು. ಈ ಪೈಕಿ ಒಮ್ಮೆ ನೆಗೆಟಿವ್ ಬಂದರೆ, ಮತ್ತೊಮ್ಮೆ ಪಾಸಿಟಿವ್ ಬಂದಿತ್ತು. ಹೀಗಾಗಿ ಮೂರನೇ ಬಾರಿಗೆ ಟೆಸ್ಟ್‌ಗೆ ಒಳಗಾಗಿದ್ದರು. ಇಂದು ವರದಿ ಬಂದಿದ್ದು, ಸೋಂಕು ದೃಢಪಟ್ಟಿದೆ.

"ನಿನ್ನೆ ನಾನು, ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್19 ಪರೀಕ್ಷೆಗೆ ಒಳಪಟ್ಟಿದ್ದೆವು. ಪಲ್ಲವಿ ಹಾಗೂ ನನ್ನ ಗನ್-ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲರದು ನೆಗೆಟಿವ್ ಬಂದಿದೆ. ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ" ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News