ಆನ್ ಲೈನ್ ಪರೀಕ್ಷೆಗೆ ವಿರೋಧ: ಕ್ರೈಸ್ಟ್ ಯುನಿವರ್ಸಿಟಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

Update: 2020-07-13 07:12 GMT

ಬೆಂಗಳೂರು, ಜು.13: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶ ಗಾಳಿಗೆ ತೂರಿದೆ ಎಂದು ಆರೋಪಿಸಿ ಕ್ರೈಸ್ಟ್ ಯುನಿವರ್ಸಿಟಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಯುನಿವರ್ಸಿಟಿ ಮುಂದೆ ಪ್ರತಿಭಟನೆ ನಡೆಸಿದರು.

ಡಿಗ್ರಿ ವಿದ್ಯಾರ್ಥಿಗಳಿಗೆ ಇಂದಿನಿಂದ ಆನ್ ಲೈನ್ ಪರೀಕ್ಷೆ ಪ್ರಾರಂಭವಾಗಲಿದೆ. ಆದರೆ ಆನ್ ಲೈನ್ ಪರೀಕ್ಷೆ ನಡೆಸದಂತೆ ಎನ್.ಎಸ್.ಯು.ಐ ವಿದ್ಯಾರ್ಥಿ ಘಟಕ ಪ್ರತಿಭಟನೆ ನಡೆಸುತ್ತಿದೆ. 

ಡೈರಿ ಸರ್ಕಲ್ ಬಳಿ ಇರುವ ಕ್ರೈಸ್ಟ್ ಯೂನಿವರ್ಸಿಟಿ ಮುಂದೆ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು, ಒಂದು ದಿನ ಕ್ಲಾಸ್ ನಡೆದಿಲ್ಲ. ಆನ್ ಲೈನ್ ಪಾಠ ನಮಗೆ ಅರ್ಥ ಆಗಿಲ್ಲ. ಹೀಗಾಗಿ ಪರೀಕ್ಷೆ ನಡೆಸಬಾರದು ಎಂದು ಒತ್ತಾಯಿಸಿದ್ದಾರೆ.

ನಾಳೆ ರಾತ್ರಿಯಿಂದ ಲಾಕ್ ಡೌನ್ ಇರಲಿದೆ. ಹೀಗಾಗಿ ಪರೀಕ್ಷೆ ಮುಂದೂಡಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಆದರೆ ಯುನಿವರ್ಸಿಟಿ ಕುಲಪತಿಗಳು ವಿದ್ಯಾರ್ಥಿಗಳ ಮನವಿ ಸ್ವೀಕರಿಸಿಲ್ಲ ಎನ್ನಲಾಗಿದೆ. ಪ್ರತಿಭಟನೆಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News