ಕೊರೋನ ಸೋಂಕಿಗೆ ಉಡುಪಿ ಜಿಲ್ಲೆಯಲ್ಲಿ ನಾಲ್ಕನೇ ಬಲಿ
Update: 2020-07-13 13:58 IST
ಉಡುಪಿ, ಜು.13: 15 ದಿನಗಳ ಹಿಂದೆ ಕೊರೋನ ಪಾಸಿಟಿವ್ ಬಂದು ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಂದೂರಿನ 70 ವರ್ಷದ ವೃದ್ಧರೊಬ್ಬರು ಇಂದು ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೋನದಿಂದ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ತೀವ್ರ ಅಸ್ವಸ್ಥತೆಯಿಂದ ಇದ್ದ ಅವರನ್ನು ಕಳೆದ ಕೆಲ ದಿನಗಳಿಂದ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಚೇತರಿಸಿಕೊಂಡ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಇಂದು ಅವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.