ಬಿಬಿಎಂಪಿ: ನೌಕರರ ವರ್ಗಾವಣೆ ಸ್ಥಗಿತ

Update: 2020-07-13 18:07 GMT

ಬೆಂಗಳೂರು, ಜು.13: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ಬಿಬಿಎಂಪಿಯ ಎಲ್ಲಾ ವೃಂದ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.

ಈ ಕುರಿತು ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಬಿಬಿಎಂಪಿಯ ನೌಕರರು ಹಾಗೂ ಅಧಿಕಾರಿಗಳನ್ನು ಈಗಾಗಲೇ ಕೊರೋನ ಸೋಂಕು ನಿಯಂತ್ರಣ ಕಾರ್ಯಗಳಿಗೆ ನಿಯೋಜಿಸಲಾಗಿದೆ.

 ಇಂತಹ ಸಂದರ್ಭದಲ್ಲಿ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದರೆ ಸೋಂಕು ನಿಯಂತ್ರಣ ಕಾರ್ಯಕ್ಕೆ ತೊಂದರೆ ಉಂಟಾಗಲಿದೆ. ಹಾಗಾಗಿ ಮುಂದಿನ ಆದೇಶದವರೆಗೆ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News