ಏಳನೇ ಸ್ಥಾನಕ್ಕೇರಿದ ವೆಸ್ಟ್ಇಂಡೀಸ್

Update: 2020-07-14 08:39 GMT

ಲಂಡನ್: ಇಲ್ಲಿ ನಡೆದ ಮೊದಲ ಕ್ರಿಕೆಟ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಜಯ ಗಳಿಸಿದ ವೆಸ್ಟ್ ಇಂಡೀಸ್ ತಂಡ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಏರಿದೆ.

  ಸೌತಾಂಪ್ಟನ್‌ನಲ್ಲಿ ರವಿವಾರ ಮುಕ್ತಾಯಗೊಂಡ ಮೊದಲ ಕ್ರಿಕೆಟ್ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ನ್ನು ಪ್ರವಾಸಿ ವೆಸ್ಟ್‌ಇಂಡೀಸ್ ತಂಡ ನಾಲ್ಕು ವಿಕೆಟ್‌ಗಳ ಅಂತರದಿಂದ ಮಣಿಸಿ ಅಂಕಪಟ್ಟಿಯಲ್ಲಿ ಭಡ್ತಿ ಪಡೆದಿತ್ತು.

 ಕೊರೋನ ವೈರಸ್ ಕಾರಣದಿಂದಾಗಿ 117 ದಿನಗಳ ಕಾಲ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಸ್ಥಗಿತಗೊಂಡಿತ್ತು. ಆ ಬಳಿಕ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗುವುದರೊಂದಿಗೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಕ್ರಿಕೆಟ್ ಆರಂಭಗೊಂಡಿತ್ತು.

ಈ ಗೆಲುವಿನೊಂದಿಗೆ ವೆಸ್ಟ್ ಇಂಡೀಸ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ ಮಾತ್ರವಲ್ಲ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಖಾತೆ ತೆರೆದಿದೆ. ಮೊದಲ ಟೆಸ್ಟ್‌ನಲ್ಲಿ ಗೆಲುವಿನೊಂದಿಗೆ 40 ಅಂಕಗಳನ್ನು ಪಡೆದಿದೆ.

   ಇದರರ್ಥ ದಕ್ಷಿಣ ಆಫ್ರಿಕ ಮತ್ತು ಬಾಂಗ್ಲಾದೇಶಕ್ಕಿಂತ ಮೂರು ಟೆಸ್ಟ್ ಪಂದ್ಯಗಳನ್ನು ಆಡಿದ ವಿಂಡೀಸ್ ಈ ಸಮಯದಲ್ಲಿ ಶ್ರೇಯಾಂಕದಲ್ಲಿ ಏಳನೇ ಸ್ಥಾನದಲ್ಲಿದೆ. ಭಾರತ 360 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, 296 ಅಂಕಗಳೊಂದಿಗೆ ಆಸ್ಟ್ರೇಲಿಯ ಎರಡನೇ ಸ್ಥಾನದಲ್ಲಿದೆ.

 ವಿಂಡೀಸ್ ನಾಯಕ ಜೇಸನ್ ಹೋಲ್ಡರ್ ಸೌತಾಂಪ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್‌ನ ಗೆಲುವನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ತಂಡದ ಅತ್ಯುತ್ತಮ ಗೆಲುವು ಎಂದು ಬಣ್ಣಿಸಿದ್ದಾರೆ. ನಾಲ್ಕನೇ ದಿನ ಆಟವನ್ನು ಶ್ಲ್ಲಾಗಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News