ವಿಪತ್ತು ನಿರ್ವಹಣಾ ಪ್ರಾಧಿಕಾರ ಏಕೆ ಸಭೆಗಳನ್ನು ನಡೆಸಿಲ್ಲ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

Update: 2020-07-14 11:24 GMT

ಬೆಂಗಳೂರು, ಜು.14: ಕೊರೋನ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದರೂ ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಏಕೆ ಸಭೆಗಳನ್ನು ನಡೆಸಿಲ್ಲ ಎಂಬುದರ ಬಗ್ಗೆ ಮುಂದಿನ ವಿಚಾರಣೆ ವೇಳೆ ಸ್ಪಷ್ಟನೆ ನೀಡಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಈ ಕುರಿತು ಎ.ಮಲ್ಲಿಕಾರ್ಜುನ ಹಾಗೂ ಹೈಕೋರ್ಟ್ ಕಾನೂನು ಸೇವಾ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಬೆಳಗಾವಿ, ರಾಯಚೂರು, ಬಾಗಲಕೋಟೆ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಯಾವುದೇ ಸಭೆಗಳನ್ನೂ ನಡೆಸಿಲ್ಲ ಎಂದು ರಾಜ್ಯ ಸರಕಾರ ನ್ಯಾಯಪೀಠಕ್ಕೆ ತಿಳಿಸಿತು. 

ಸರಕಾರದ ವಿವರಣೆಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠವು ಸರಕಾರ ಈ ಕೂಡಲೇ ಸಭೆಗಳ ಬಗ್ಗೆ ಗಮನ ಹರಿಸಬೇಕು. ಅಲ್ಲದೆ, ಸೋಂಕು ಹೆಚ್ಚಳವಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬರೀ ಎರಡು ಸಭೆಗಳನ್ನು ಮಾತ್ರ ನಡೆಸಿರುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News