ಉಡುಪಿ ನಗರಸಭೆ ಆರೋಗ್ಯ ನಿರೀಕ್ಷಕರಿಗೆ ಕೊರೋನ ಪಾಸಿಟಿವ್: ಕಚೇರಿ ಸೀಲ್‌ಡೌನ್
Update: 2020-07-14 20:56 IST
ಉಡುಪಿ, ಜು.14: ಉಡುಪಿ ನಗರಸಭೆಯ ಆರೋಗ್ಯ ನಿರೀಕ್ಷಕರಿಗೆ ಕೊರೋನ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಗರಸಭೆ ಕಚೇರಿಯನ್ನು ಇಂದು ಸೀಲ್‌ಡೌನ್ ಮಾಡಲಾಗಿದೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಕಚೇರಿಗೆ ಗೈರು ಹಾಜರಾಗಿ ಮನೆಯಲ್ಲಿಯೇ ಉಳಿದುಕೊಂಡಿದ್ದರು. ಈ ಮಧ್ಯೆ ಕೊರೋನ ಪರೀಕ್ಷೆಗೆ ಒಳಗಾಗಿದ್ದ ಇವರ ವರದಿಯು ಜು.13ರಂದು ಪಾಸಿ ಟಿವ್ ಎಂಬುದಾಗಿ ಬಂದಿದೆ. ಇವರಿಗೆ ಯಾರ ಸಂಪರ್ಕದಿಂದ ಸೋಂಕು ಬಂದಿದೆ ಎಂಬುದು ಇನ್ನು ಖಚಿತವಾಗಿಲ್ಲ.
ಈ ಹಿನ್ನೆಲೆಯಲ್ಲಿ ನಗರಸಭೆ ಕಚೇರಿಯನ್ನು ಮೂರು ದಿನಗಳ ಕಾಲ ಬಂದ್ ಮಾಡಿ, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಂದು ಇಡೀ ಕಚೇರಿಯನ್ನು ಸ್ಯಾನಟೈಸ್ ಮಾಡಲಾಗುತ್ತದೆ. ಇವರನ್ನು ಪ್ರಾಥಮಿಕವಾಗಿ ಸಂಪರ್ಕಿಸಿದ ಅಧಿಕಾರಿಗಳು ಮತ್ತು ಎಲ್ಲ ಸಿಬ್ಬಂದಿ ಗಳನ್ನು ಪರೀಕ್ಷೆಗೆ ಒಳಪಡಿಸ ಲಾಗುವುದು ಎಂದು ಪೌರಾಯುಕ್ತ ಆನಂದ ಕಲ್ಲೋಳಿಕರ್ ತಿಳಿಸಿದ್ದಾರೆ.