ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ: ಸಂಜಯ್ ಝಾ ಅವರನ್ನು ಅಮಾನತುಗೊಳಿಸಿದ ಕಾಂಗ್ರೆಸ್

Update: 2020-07-14 17:51 GMT

ಹೊಸದಿಲ್ಲಿ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಜಯ್ ಝಾ ಅವರನ್ನು ಅಮಾನತುಗೊಳಿಸಲಾಗಿದೆ.

ಮಹಾರಾಷ್ಟ್ರ ಕಾಂಗ್ರೆಸ್ ನ ಈ ಆದೇಶಕ್ಕೆ ಬಾಳಾಸಾಹೇಬ್ ಥೋರಟ್ ಸಹಿ ಹಾಕಿದ್ದಾರೆ.  

ನಿರ್ದಿಷ್ಟವಾಗಿ ಯಾವ ಕಾರಣಕ್ಕಾಗಿ ಕಾಂಗ್ರೆಸ್ ಈ ಕ್ರಮ ಕೈಗೊಂಡಿದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.  ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ – ಸಚಿನ್ ಪೈಲಟ್ ನಡುವಿನ ಮನಸ್ತಾಪಕ್ಕೆ ಸಂಬಂಧಿಸಿ ಅವರು ನೀಡಿರುವ ಹೇಳಿಕೆ ಮತ್ತು ಟ್ವೀಟ್ ಗಳಿಗೆ ಸಂಬಂಧಿಸಿ ಕಾಂಗ್ರೆಸ್ ಈ ಕ್ರಮ ಕೈಗೊಂಡಿರಬಹುದು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News