ಬೆಂಗಳೂರು: ಕೊರೋನ ಸೋಂಕಿನಿಂದ ಪಿಎಸ್ಸೈ ಸಾವು

Update: 2020-07-14 17:55 GMT

ಬೆಂಗಳೂರು, ಜು.14: ಕೊರೋನ ಸೋಂಕಿನಿಂದ ಇಲ್ಲಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸಿದ್ದ ಪಿಎಸ್ಸೈಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಅತ್ತಿಬೆಲೆ ನಿವಾಸಿಯಾದ 59 ವರ್ಷದ ಪಿಎಸ್ಸೈ ಸಾವನ್ನಪ್ಪಿದ್ದು, ಆಯುಕ್ತರ ಕಚೇರಿಯ ಕಂಟ್ರೋಲ್ ರೂಂನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಆದರೆ, ಕಳೆದ ರವಿವಾರ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ತೀವ್ರ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News