ಮೊರಾರ್ಜಿ ಪಿಯು ಕಾಲೇಜು ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ

Update: 2020-07-14 17:56 GMT

ಮಂಗಳೂರು, ಜು.14: ನಗರದ ಮೆನ್ನಬೆಟ್ಟು ಗ್ರಾಮದ ಕಮ್ಮಾಜೆಯಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 31 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ಉಳಿದ 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡಿದ್ದಾರೆ. ಸೌಜನ್ಯ 550, ಬಸವರಾಜ ಮತ್ತು ಯಶೋಧ 545 ಮತ್ತು ಪರಶುರಾಮ 535 ಅಂಕ ಗಳಿಸಿದ್ದಾರೆ.

ಶೇ.100 ಫಲಿತಾಂಶಕ್ಕೆ ಕಾರಣರಾದ ಕಾಲೇಜು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಅಭಿನಂದಿಸಿದ್ದಾರೆ ಎಂದು ಕಮ್ಮಾಜೆ ಮೆನ್ನಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಶುಂಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News