ಬೇರೆ ಜಿಲ್ಲೆಗೆ ರಸಗೊಬ್ಬರ ಸರಬರಾಜು ಮಾಡಿದರೆ ಕಾನೂನು ಕ್ರಮ: ಮಂಡ್ಯ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಚ್ಚರಿಕೆ

Update: 2020-07-14 18:32 GMT

ಮಂಡ್ಯ, ಜು.14:  ಜಿಲ್ಲೆಗೆ ಸರಬರಾಜು ಆಗುವ ರಸಗೊಬ್ಬರವನ್ನು ವಾಣಿಜ್ಯ ಉದ್ದೇಶಕ್ಕಾಗಿ ಇತರ ಜಿಲ್ಲೆಗಳಿಗೆ ಸರಬರಾಜು ಮಾಡುವುದು ಕಂಡು ಬಂದಲ್ಲಿ ಸಂಬಂಧಪಟ್ಟ ತಯಾರಿಕ ಪ್ರತಿನಿಧಿಗಳ ಮೇಲೆ  ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಎಚ್ಚರಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮುಂಗಾರು ಹಂಗಾಮಿಗೆ ರಸಗೊಬ್ಬರದ ಸರಬರಾಜು ಹಾಗೂ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ರೈತರಿಗೆ ಅಗತ್ಯವಿರುವ ರಸಗೊಬ್ಬರಗಳನ್ನು ಯಾವುದೇ ಕೊರತೆಯಾಗದಂತೆ ಸೂಕ್ತ ರೀತಿಯಲ್ಲಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಪಿ.ಎ.ಸಿ.ಎಸ್ ಮೂಲಕವೇ ರಸಗೊಬ್ಬರ ವಿತರಣೆ ಆಗಬೇಕು. ಅಧಿಕೃತವಾಗಿ ಲೈಸನ್ಸ್ ಹೊಂದಿರುವವರಿಗೆ ಮಾತ್ರ ರಸಗೊಬ್ಬರ ವಿತರಣೆ ಮಾಡಬೇಕು. ಸಮರ್ಪಕವಾಗಿ ರೈತರಿಗೆ ಬಿತ್ತನೆ ಬೀಜ ವಿತರಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಮತ್ತು ತಾಲೂಕು ಕೃಷಿ ಇಲಾಖೆಯ ಅಧಿಕಾರಿಗಳು, ಜಿಲ್ಲಾ ರಸಗೊಬ್ಬರ ಸರಬರಾಜು ಪ್ರತಿನಿಧಿಗಳು, ಜಿಲ್ಲಾ ಬಿತ್ತನೆ ಬೀಜ ಪ್ರತಿನಿಧಿಗಳು ಹಾಗೂ ಅಮಾಲಿ ಮತ್ತು ಸಾಗಣೆ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News