200 ಕೋಟಿ ರೂ.ವೆಚ್ಚದಲ್ಲಿ ತಿರುಮಲದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಅನುಮೋದನೆ

Update: 2020-07-14 18:32 GMT

ಬೆಂಗಳೂರು, ಜು. 14: ಆಂಧ್ರಪ್ರದೇಶದ ತಿರುಮಲದಲ್ಲಿರುವ ಕರ್ನಾಟಕ ರಾಜ್ಯದ 7.05 ಎಕರೆ ಜಾಗದಲ್ಲಿ ನೂತನ ಅತಿಥಿ ಗೃಹವನ್ನು ನಿರ್ಮಾಣ ಮಾಡಲು 200 ಕೋಟಿ ರೂ.ಗಳಿಗೆ ಅನುಮೋದನ ನೀಡಲಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

1 ಸಾವಿರಕ್ಕೂ ಹೆಚ್ಚು ಯಾತ್ರಿಕರಿಗೆ ವಸತಿ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಮಹಾನಕ್ಷೆಯಂತೆ ಹೊಸ ವಸತಿ ಗೃಹ ನಿರ್ಮಾಣ, ಕಲ್ಯಾಣ ಮಂಟಪ, ಡಾಮೆರ್ಂಟ್ರಿ, ಸಿಬ್ಬಂದಿ ಕೊಠಡಿ ಮತ್ತು ಇತರೆ ಅಭಿವೃದ್ಧಿ ಕಾಮಾಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

140 ಯಾತ್ರಾರ್ಥಿಗಳ ವಾಸ್ತವ್ಯಕ್ಕಾಗಿ 12 ಡಾರ್ಮೆಂಟ್ರಿಗಳು, 610 ಜನ ಯಾತ್ರಾರ್ಥಿಗಳ ವಾಸ್ತವ್ಯಕ್ಕಾಗಿ 305 ಕೊಠಡಿಗಳು, ಗಣ್ಯರಿಗೆ ವಿಶೇಷ 24 ಸೂಟ್ ಕೊಠಡಿಗಳು ಮತ್ತು 4 ಡಬಲ್ ಸೂಟ್ ಕೊಠಡಿಗಳು, 1 ಕಲ್ಯಾಣ ಮಂಟಪ, ಕಾರು ಬಸ್ಸುಗಳಿಗೆ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ, ಕಲ್ಯಾಣಿ ಜೀರ್ಣೋದ್ಧಾರ, ಹೊಸ ರಸ್ತೆಗಳ ನಿರ್ಮಾಣ, ಲ್ಯಾಂಡ್ ಸ್ಕೇಪಿಂಗ್, ಉದ್ಯಾನವನ ಅಭಿವೃದ್ಧಿ ಕಾಮಾಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News