ಲಾಕ್‍ಡೌನ್: ಸಿವಿಲ್ ಪೊಲೀಸ್ ಆಗಲು ಯುವಜನತೆಗೆ ಆಹ್ವಾನ; ಭಾಸ್ಕರ್ ರಾವ್

Update: 2020-07-14 18:37 GMT

ಬೆಂಗಳೂರು, ಜು.14: ರಾಜಧಾನಿ ಬೆಂಗಳೂರು ಲಾಕ್‍ಡೌನ್ ಹಿನ್ನೆಲೆ ಸಿವಿಲ್ ಪೊಲೀಸ್ ವಾರ್ಡನ್ ಆಗಿ ಕೆಲಸ ಮಾಡಲು ಯುವಜನತೆಗೆ ಆಹ್ವಾನ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಮಂಗಳವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ದೈಹಿಕವಾಗಿ ಸದೃಢವಾದ ಹಾಗೂ ಸೇವಾ ಮನೋಭಾವನೆಯುಳ್ಳ ಯುವಕ ಹಾಗೂ ಯುವತಿಯರಿಗೆ ಸಿವಿಲ್ ಪೊಲೀಸ್ ವಾರ್ಡನ್ ಆಗಲು ಮುಕ್ತ ಅವಕಾಶ ನೀಡಲಾಗುತ್ತಿದೆ.

18ರಿಂದ 45 ವರ್ಷದೊಳಗಿನ ವ್ಯಕ್ತಿಗಳು ವಾರ್ಡನ್ ಆಗಲು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಕೊರೋನ ವೈರಾಣು ವಿರುದ್ಧದ ಹೋರಾಟದಲ್ಲಿ ಸ್ಥಳೀಯ ಪೊಲೀಸ್ ಜೊತೆಯಲ್ಲಿ ಕೆಲಸ ಮಾಡಬೇಕು.

ಸ್ವಯಂ ಸೇವಕರಾಗಲು ಬೆಂಗಳೂರು ನಗರ ಪೊಲೀಸ್ ಇಲಾಖೆ ವೆಬ್‍ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News