ದ್ವಿತೀಯ ಪಿಯು ಸಾಧಕಿಯರು

Update: 2020-07-15 04:30 GMT

ಮಂಗಳೂರು, ಜು.15: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕುಂಬ್ರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಜದೀರಾ 538(89.66ಶೇ.) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಕಾಸರಗೋಡು ಜಿಲ್ಲೆಯ ದೇಲಂಪಾಡಿ ದಾಸನಡ್ಕ ನಿವಾಸಿ ಮುಹಮ್ಮದ್ ಹಾಗೂ ಖದೀಜಾ ದಂಪತಿಯ ಪುತ್ರಿ.

ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಶೈಲಾ 527 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಇವರು ಸುಳ್ಯ ತಾಲೂಕು ಗೂನಡ್ಕ ನಿವಾಸಿ ಅಬ್ದುಲ್ಲಾ ಜಿ.ಎಂ. ಹಾಗೂ ಶಕೀನಾ ದಂಪತಿಯ ಪುತ್ರಿ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News