ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಕೆಎಂಸಿ ಮಣಿಪಾಲದಲ್ಲಿ ಕೋವಿಡ್-19 ಪರೀಕ್ಷಾ ಸೌಲಭ್ಯ

Update: 2020-07-15 11:42 GMT

ಮಣಿಪಾಲ, ಜು.15: ವಿದೇಶಗಳಿಗೆ ಪ್ರಯಾಣ ಮಾಡುವವರಿಗೆ ಈಗ ಕೋವಿಡ್-19 ಪರೀಕ್ಷಾ ವರದಿ ಕಡ್ಡಾಯವಾಗಿದ್ದು, ಇದಕ್ಕಾಗಿ ಸಾರ್ವಜನಿಕ ರಿಂದ ಅನೇಕ ಮನವಿಗಳು ಬರುತ್ತಿವೆ. ಇಂಥವರ ಅನುಕೂಲಕ್ಕಾಗಿ ಇದೀಗ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶೇಷ ಕೋವಿಡ್-19 ಪರೀಕ್ಷಾ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರವು ಆಸ್ಪತ್ರೆಯ ಕೆಲಸದ ದಿನಗಳಲ್ಲಿ ಅಪರಾಹ್ನ 2:00ರಿಂದ ಸಂಜೆ 5:00 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ವಿದೇಶಕ್ಕೆ ಪ್ರಯಾಣ ಬೆಳೆಸುವವರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿ ದ್ದಾರೆ. ಪರೀಕ್ಷಾ ವರದಿ ಬರಲು 24ರಿಂದ 48 ಗಂಟೆ ಬೇಕಾಗಿದ್ದು, ಪರೀಕ್ಷಾ ವರದಿಗೆ 96 ಗಂಟೆಗಳವರೆಗೆ ಮಾತ್ರ ಮಾನ್ಯತೆ ಇರುತ್ತದೆ ಎಂದೂ ಪ್ರಕಟಣೆ ತಿಳಿಸಿದೆ.

ಈ ಸೇವೆಯು ಪೂರ್ವ ನಿಗದಿಯೊಂದಿಗೆ (ಅಪಾಯಿಂಟ್‌ಮೆಂಟ್ ಪಡೆದು) ಮಾತ್ರ ಲಭ್ಯವಿದ್ದು, ಪೂರ್ವನಿಗದಿಗಾಗಿ ಬೆಳಗ್ಗೆ 9:00ರಿಂದ ಸಂಜೆ 4:00ರ ವರೆಗೆ ದೂರವಾಣಿ ಸಂಖ್ಯೆ:0820-2922057ಕ್ಕೆ ಕರೆ ಮಾಡುವಂತೆ ತಿಳಿಸಲಾಗಿದೆ. ಈ ಸೇವೆಯನ್ನು ಪಡೆಯಲು ಆಸ್ಪತ್ರೆಗೆ ಬರುವಾಗ ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು ಎಂದು ಡಾ.ಅವಿನಾಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News