ನನ್ನ ಹುಟ್ಟುಹಬ್ಬ ಆಚರಿಸುವ ಬದಲು ಸೋಂಕಿತರ ಕುಟುಂಬಕ್ಕೆ ಸಹಾಯ ಮಾಡಿ: ಮಲ್ಲಿಕಾರ್ಜುನ ಖರ್ಗೆ

Update: 2020-07-15 14:20 GMT

ಕಲಬುರ್ಗಿ, ಜು.15: ದೇಶದಲ್ಲಿ ಪ್ರತಿ ದಿನ ವ್ಯಾಪಕವಾಗಿ ಕೊರೋನ ಸೋಂಕು ಹರಡುತ್ತಿದ್ದು, ಪಕ್ಷದ ಕಾರ್ಯಕರ್ತರು ನನ್ನ ಹುಟ್ಟುಹಬ್ಬ ಆಚರಿಸುವ ಬದಲು ಸೋಂಕಿತ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ರಾಜ್ಯಸಭಾ ಸದಸ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.

ಕಲಬುರ್ಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನದಿಂದಾಗಿ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೆ, ಮತ್ತೊಂದು ಕಡೆ ಕೊರೋನ ಸೋಂಕಿತರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಹೀಗಾಗಿ, ಈ ಬಾರಿ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಪಕ್ಷದ ಕಾರ್ಯಕರ್ತರೂ ನನ್ನ ಹುಟ್ಟುಹಬ್ಬವನ್ನು ಆಚರಿಸುವ ಬದಲು ಸೋಂಕಿತರ ಕುಟುಂಬಗಳಿಗೆ ಕೈಲಾದಷ್ಟು ಸಹಾಯ ಮಾಡಬೇಕೆಂದು ಕರೆ ನೀಡಿದರು.

ಬೆಂಗಳೂರು ನಗರ ಸೇರಿ ಇತರೆ ಜಿಲ್ಲೆಗಳಲ್ಲಿ ಲಾಕ್‍ಡೌನ್ ಜಾರಿಯಲ್ಲಿದೆ. ಹೀಗಾಗಿ, ಇದೇ ಜು.21ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ, ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರೂ ಸಹಕರಿಸಬೇಕು ಹಾಗೂ ಕೊರೋನ ಕುಟುಂಬದವರಿಗೆ ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News