×
Ad

ಮದ್ಯದ ವಿಚಾರದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

Update: 2020-07-15 21:57 IST

ಬೆಂಗಳೂರು, ಜು.15: ಮದ್ಯದ ವಿಚಾರವಾಗಿ ಯುವಕಯೋರ್ವನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಪಂತರಪಾಳ್ಯದ ನಿವಾಸಿ ಶಶಿ(22) ಕೊಲೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ 8 ಗಂಟೆಯಿಂದ ಲಾಕ್‍ಡೌನ್ ಜಾರಿಯಾದ ವೇಳೆ ಶಶಿ ಮತ್ತು ಸ್ನೇಹಿತರಾದ ವಿನೋದ್ ಹಾಗೂ ವೇಲು ಮದ್ಯ ತರುವ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದು, ಮಾರಕಾಸ್ತ್ರಗಳಿಂದ ಶಶಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯರ ಸಹಾಯದಿಂದ ಶಶಿ ಅನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಠಾಣಾ ಪೊಲೀಸರು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News