ಪಾಂಡವಪುರ ಸಕ್ಕರೆ ಕಾರ್ಖಾನೆಯಲ್ಲಿ ಅಕ್ರಮ ಆರೋಪ: ಮುರುಗೇಶ್ ನಿರಾಣಿಗೆ ಹೈಕೋರ್ಟ್ ತುರ್ತು ನೋಟಿಸ್

Update: 2020-07-15 17:27 GMT

ಬೆಂಗಳೂರು, ಜು.15: ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ನಲವತ್ತು ವರ್ಷಗಳ ಕಾಲಾವಧಿಗೆ ಗುತ್ತಿಗೆಗೆ ಪಡೆದುಕೊಂಡಿರುವ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಎನ್‍ಎಸ್‍ಎಲ್ ಶುಗರ್ಸ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನಿರಾಣಿ ಶುಗರ್ಸ್ ಮಾಲಕ ಮುರುಗೇಶ್ ನಿರಾಣಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.

ನಿರಾಣಿ ಶುಗರ್ಸ್ ಮಾಲಕ ಮುರುಗೇಶ್ ನಿರಾಣಿ ಹಾಗೂ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಸೇರಿ ಎಲ್ಲ ಪ್ರತಿವಾದಿಗಳಿಗೆ ಹೈಕೋರ್ಟ್ ತುರ್ತು ನೊಟಿಸ್ ಜಾರಿಗೊಳಿಸಿದೆ. ಅಲ್ಲದೆ, ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯದ ಆಯುಕ್ತರಿಗೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿದೆ.

‘ನಾನು ಗ್ಲೋಬಲ್ ಟೆಂಡರ್ ನಲ್ಲಿ 40 ವರ್ಷಕ್ಕೆ ಪಿಎಸ್‍ಎಸ್‍ಕೆಯನ್ನು ಗುತ್ತಿಗೆಗೆ ಪಡೆದಿದ್ದೇವೆ. ಎನ್‍ಎಸ್‍ಎಲ್ ಶುಗರ್ಸ್ ಸಂಸ್ಥೆಯವರು ಆರೋಪಿಸಿರುವಂತೆ ಟೆಂಡರ್ ನಲ್ಲಿ ಯಾವುದೇ ಅಕ್ರಮ ನಡೆದಿಲ್ಲ.’

-ಮುರುಗೇಶ್ ನಿರಾಣಿ, ನಿರಾಣಿ ಶುಗರ್ಸ್ ಮಾಲಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News