ದ್ವಿತೀಯ ಪಿಯುಸಿ ಪರೀಕ್ಷೆ: ಅಲ್ಪಸಂಖ್ಯಾತರ ವಸತಿ ಕಾಲೇಜು; ಶೇ.100 ಫಲಿತಾಂಶ

Update: 2020-07-15 17:51 GMT
ರಾಧಿಕಾ, ಭಾಗ್ಯ, ಅಂಬಿಕಾ

ಮಂಗಳೂರು, ಜು.15: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮಂಗಳೂರಿನ ದೇರಳಕಟ್ಟೆ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ ಎಂಟು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಮತ್ತು ಮೂವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಗೊಂಡಿದ್ದಾರೆ. ರಾಧಿಕಾ ಸಿದ್ದಪ್ಪ ಮುಂಜೆ 541, ಭಾಗ್ಯ ನಾಗಯ್ಯ ಹಿರೇಮಠ 540, ಅಂಬಿಕಾ ಎಸ್.ವೈ. 534, ಫಾತೀಮತ್ ಝಕೀಯ 531, ಪ್ರೇಮಲತಾ ಕೆ. 521 ಅಂಕ ಗಳಿಸಿದ್ದಾರೆ.

ಪ್ರವೇಶಕ್ಕೆ ಅರ್ಜಿ ಆಹ್ವಾನ: 2020-21ನೇ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ್ದು, ಹೆಚ್ಚಿನ ಮಾಹಿತಿಗಾಗಿ 8970707858ನ್ನು ಸಂಪರ್ಕಿಸಲು ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನ ಪ್ರಾಂಶುಪಾಲರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News