ದ್ವಿತೀಯ ಪಿಯು ಸಾಧಕಿಯರು

Update: 2020-07-15 18:03 GMT
ಸಾಜಿದಾ, ಆಶಿಕಾ

ಉಪ್ಪಿನಂಗಡಿ: ನೆಲ್ಯಾಡಿ ಸಂತ ಜಾರ್ಜ್ ಪಪೂ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಾಜಿದಾ 562 (ಶೇ. 93.66) ಅಂಕ ಗಳಿಸುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಸಾಜಿದಾ ಅವರು ಪಡುಬೆಟ್ಟು ನಿವಾಸಿ ಸಾದಿಕ್ ಹಾಗು ಝುಬೈದಾ ಅವರ ಪುತ್ರಿ.

ಉಪ್ಪಿನಂಗಡಿ ಇಂದ್ರಪ್ರಸ್ಥ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆಶಿಕಾ 542 (ಶೇ. 90.03) ಅಂಕ ಗಳಿಸುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಆಶಿಕಾ ಅವರು ಪಡುಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ ಹಾಗು ಜಮೀಲ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News