ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Update: 2020-07-16 05:04 GMT

ಬೆಂಗಳೂರು, ಜು.16: ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಾಲ ಕಲಾವಿದೆಯಾಗಿ ರಂಗಭೂಮಿ ಪ್ರವೇಶಿಸಿದ ಸುಭದ್ರಮ್ಮ ಮನ್ಸೂರ್, ಬದುಕಿನ ಏಳುಬೀಳುಗಳ ನಡುವೆಯೂ ವೃತ್ತಿ ರಂಗಭೂಮಿಯಲ್ಲಿ ತಮ್ಮದೇ ಛಾಪು ಮೂಡಿಸಿದವರು. ರಕ್ತರಾತ್ರಿ ನಾಟಕದಲ್ಲಿನ ದ್ರೌಪದಿಯ ಪಾತ್ರ, ಕುರುಕ್ಷೇತ್ರ ನಾಟಕದ ಗಾಂಧಾರಿಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಮನೆ ಮಾತಾಗಿದ್ದವರು ಎಂದು ಮುಖ್ಯಮಂತ್ರಿ ಸ್ಮರಿಸಿದ್ದಾರೆ.

ಇವರ ನಿಧನದಿಂದ ರಂಗಭೂಮಿಯು ಅನರ್ಘ್ಯ ರತ್ನವೊಂದನ್ನು ಕಳೆದುಕೊಂಡಂತಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News