ಅಂಬಲಪಾಡಿ: ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ
Update: 2020-07-16 17:42 IST
ಉಡುಪಿ, ಜು.16: ಜಿಪಂನ ತುರ್ತು ಕುಡಿಯುವ ನೀರಿನ ಯೋಜನೆಯಡಿ ಅಂಬಲಪಾಡಿ ಗ್ರಾಪಂ ವ್ಯಾಪ್ತಿಯ ಕಪ್ಪೆಟ್ಟು ಪಾದೆ ಬಳಿ ಕುಡಿಯುವ ನೀರಿನ ಮೇಲಸ್ತಂತಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಜಿಪಂ ಅಧ್ಯಕ್ಷ ದಿನಕರ ಬಾಬು ಬುಧವಾರ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು ಶಾಶ್ವತ ಕುಡಿಯುವ ನೀರಿನ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು ಎಲ್ಲರೂ ಇದರ ಸದುಪಯೋಗ ಪಡೆಯಲಿ ಎಂದರು.
ಕಾರ್ಯಕ್ರಮದಲ್ಲಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ತಾಪಂ ಸದಸ್ಯ ರಾಜೇಂದ್ರ ಪಂದುಬೆಟ್ಟು, ಗ್ರಾಪಂ ನಿಕಟಪೂರ್ವ ಅಧ್ಯಕ್ಷ ಪ್ರಮೋದ್ ಸಾಲ್ಯಾನ್, ಜಗದೀಶ್ ಆಚಾರ್ಯ, ಸೋಮನಾಥ್, ಜಯ ಶೆಟ್ಟಿ, ಸುಂದರ ಪೂಜಾರಿ, ಶಶಿಧರ ಸುವರ್ಣ, ಶಿವಕುಮಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.