×
Ad

ಜು.17ರಿಂದ ಕಾಸರಗೋಡು ಜಿಲ್ಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

Update: 2020-07-16 17:52 IST

ಕಾಸರಗೋಡು: ಸಂಪರ್ಕದಿಂದ ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜು.17ರಿಂದ 31ರ ತನಕ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ತಿಳಿಸಿದ್ದಾರೆ. ಖಾಸಗಿ, ಕೆ.ಎಸ್.ಆರ್.ಟಿ.ಸಿ. ಬಸ್ಸುಗಳಿಗೂ ನಿಯಂತ್ರಣ ಅನ್ವಯವಾಗಲಿದೆ.

ಆದೇಶವನ್ನು ಉಲ್ಲಂಘಿಸುವವರ ವಿರುದ್ಧ  ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅನಗತ್ಯವಾಗಿ ವಾಹನಗಳನ್ನು ರಸ್ತೆಗಿಳಿಸಿದ್ದಲ್ಲಿ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಆದೇಶ ನೀಡಲಾಗಿದ್ದು, ನಾಳೆಯಿಂದ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News