ಸರಕಾರಕ್ಕೆ ಲೆಕ್ಕ ಕೇಳುವುದರಲ್ಲಿ ತಪ್ಪೇನಿದೆ: ಸಿದ್ದರಾಮಯ್ಯ ಪ್ರಶ್ನೆ

Update: 2020-07-16 12:43 GMT

ಬೆಂಗಳೂರು, ಜು. 16: `ಲೆಕ್ಕ ಕೇಳುವ ಸಮಯ ಇದಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಅದು ನನಗೆ ಗೊತ್ತಿಲ್ಲ. ರಾಜ್ಯ ಸರಕಾರ ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ನಡೆಸಿದ್ದು, ಲೆಕ್ಕ ಕೊಡಿ ಎಂದು ಕೇಳಲು ಪಕ್ಷದ ಎಲ್ಲ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಣೆ ನೀಡಿದ್ದಾರೆ.

ಗುರುವಾರ ತನ್ನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರು ನನ್ನ ಜೊತೆಗಿನ ವಿಡಿಯೋ ಸಂವಾದದಲ್ಲಿ ಮಾತನಾಡಿದ್ದರು. ಶಿವಕುಮಾರ್ ಅವರೊಂದಿಗೆ ಈ ಬಗ್ಗೆ ಮಾತನಾಡುವೆ. ವೈದ್ಯಕೀಯ ಉಪಕರಣ ಅವ್ಯವಹಾರ ಸಂಬಂಧ ಸರಕಾರಕ್ಕೆ ಲೆಕ್ಕ ಕೇಳುವುದರಲ್ಲಿ ತಪ್ಪೇನಿದೆ. ರಾಜ್ಯ ಸರಕಾರ ಕೊರೋನ ಸೋಂಕು ನಿಯಂತ್ರಣ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.

ಕೋವಿಡ್ ನಿಯಂತ್ರಣಕ್ಕೆ ವೈದ್ಯಕೀಯ ಸಾಮಗ್ರಿಗಳ ಖರೀದಿ ಸಂಬಂಧ ಲೆಕ್ಕ ಕೊಡಿ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಯಜಭಾಸ್ಕರ್ ಅವರಿಗೆ ಪತ್ರ ಬರೆದಿದ್ದೇನೆ. ಇನ್ನೂ ಒಂದೆರಡು ದಿನಗಳಲ್ಲೆ ಲೆಕ್ಕ ಕೊಡುವುದಾಗಿ ತಿಳಿಸಿದ್ದಾರೆ. ಆ ಬಳಿಕ ಸರಕಾರದ ದಾಖಲೆಗಳನ್ನು ಪರಿಶೀಲನೆ ನಡೆಸಿ ಈ ಬಗ್ಗೆ ನಾನು ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಇದೇ ವೇಳೆ ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News