ಜಿಲ್ಲಾಡಳಿತ ಮಾರ್ಗಸೂಚಿ ಪಾಲಿಸದಿದ್ದರೆ ಕ್ರಮ: ವಕ್ಫ್ ಮಂಡಳಿ

Update: 2020-07-16 15:54 GMT

ಉಡುಪಿ, ಜು.16: ಉಡುಪಿ ಜಿಲ್ಲೆಯಾದ್ಯಂತ ಜಿಲ್ಲಾಡಳಿತ 14 ದಿನಗಳ ಕಾಲ ಸೀಲ್‌ಡೌನ್ ಜಾರಿ ಮಾಡಿರುವುದರಿಂದ ಎಲ್ಲ ವಕ್ಫ್ ಸಂಸ್ಥೆಗಳ ಮಸೀದಿ ಆಡಳಿತ ಸಮಿತಿಗಳು ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉಡುಪಿ ಜಿಲ್ಲಾ ವಕ್ಫ್ ಅಧಿಕಾರಿ ತಿಳಿಸಿದ್ದಾರೆ.

ಮಾರ್ಗಸೂಚಿಯಂತೆ ಧಾರ್ಮಿಕ ಸಂಸ್ಥೆಗಳಲ್ಲಿ 20ಕ್ಕಿಂತ ಹೆಚ್ಚು ಮಂದಿ ಸೇರು ವಂತಿಲ್ಲ. ಆದುದರಿಂದ ಜು.29ರವರೆಗೆ ಜುಮ್ಮಾ ನಮಾಝ್ ಮತ್ತು ಸಾಮೂಹಿಕ ನಮಾಝ್‌ಗಳಲ್ಲಿ 20ಕ್ಕಿಂತ ಹೆಚ್ಚು ಮಂದಿ ಇರಬಾರದು ಮತ್ತು ರವಿವಾರ ಹಿಂದಿನಂತೆ ಸಂಪೂರ್ಣ ಲಾಕ್‌ಡೌನ್ ಇರುತ್ತದೆ. ಈ ಬಗ್ಗೆ ಯಾವುದೇ ರೀತಿಯ ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News