ಉಡುಪಿ: ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರ ಬಂಧನ

Update: 2020-07-16 16:06 GMT

ಉಡುಪಿ, ಜು.16: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಡಿಸಿಐಬಿ ಪೊಲೀಸರು ಮಣಿಪಾಲ ಶೀಂಬ್ರಾ ಎಂಬಲ್ಲಿ ರುವ ವ್ಯಾಲ್ಯು ವೀವ್ ಕೌಂಟಿ ಕ್ಲಬ್ ಬಳಿ ಜು.15ರಂದು ಬಂಧಿಸಿದ್ದಾರೆ.

ದೊಡ್ಡಣಗುಡ್ಡೆಯ ಅಬ್ದುಲ್ ರೌಫ್(20) ಮತ್ತು ಕೊಳಲಗಿರಿಯ ಅಫ್ತಾಬ್ ಅಲಿ(24) ಬಂಧಿತ ಆರೋಪಿಗಳು. ಇವರಿಂದ ಒಟ್ಟು 1,45,000ರೂ. ಮೌಲ್ಯದ 1ಕೆ.ಜಿ. 140 ಗ್ರಾಂ ಗಾಂಜಾ, 2 ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಮಣಿಪಾಲ ಠಾಣೆಗೆ ಹಸ್ತಾಂತರಿಸಿದ್ದು ಪ್ರಕರಣ ದಾಖಲಾಗಿದೆ.

ಎಸ್ಪಿ ವಿಷ್ಣುವರ್ಧನ್ ಎನ್. ನಿರ್ದೇಶನದಲ್ಲಿ ಹೆಚ್ಚುವರಿ ಎಸ್ಪಿ ಕುಮಾರ ಚಂದ್ರ ಹಾಗೂ ಉಡುಪಿ ಡಿವೈಎಸ್ಪಿ ಟಿ.ಆರ್.ಜೈಶಂಕರ್ ಮಾರ್ಗದರ್ಶನದಲ್ಲಿ, ಉಡುಪಿ ಡಿಸಿಐಬಿ ಪೊಲೀಸ್ ನಿರೀಕ್ಷಕ ಮಂಜಪ್ಪಡಿ.ಆರ್. ನೇತೃತ್ವದಲ್ಲಿ ಡಿಸಿಐಬಿ ಎಎಸ್ಸೈ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ರಾಮು ಹೆಗ್ಡೆ, ಚಂದ್ರ ಶೆಟ್ಟಿ, ಸುರೇಶ, ಸಂತೋಷ ಕುಂದರ್, ರಾಘವೇಂದ್ರ ಉಪ್ಪುಂದ, ರಾಜು ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಈ ಕಾರ್ಯಾಚರಣೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News