ಕೊರೋನ ಸೋಂಕಿಗೆ ಹೆದರಿ ವ್ಯಕ್ತಿ ಆತ್ಮಹತ್ಯೆ

Update: 2020-07-16 17:19 GMT

ವಿಜಯಪುರ, ಜು.16: ಕೊರೋನ ಸೋಂಕಿನ ಭಯದಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಜೋರಾಪುರ ಪೇಟೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

57 ವರ್ಷದ ವ್ಯಕ್ತಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇವರು ಅನಾರೋಗ್ಯದ ಕಾರಣದಿಂದ ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೋನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ತೆರಳಲು ವೈದ್ಯರು ಸೂಚಿಸಿದ್ದರು. ಆದರೆ, ಕೋವಿಡ್ ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಮನೆಯಲ್ಲಿ ನಸುಕಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.

ಕೊರೋನ ಸೋಂಕು ತಗುಲಿದೆ ಎಂಬ ಭಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇದರಿಂದ ಬಡಾವಣೆ ಜನತೆಯಲ್ಲಿ ಆತಂಕ ಮನೆಮಾಡಿದೆ. ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News