ಬಾಲಕಿಯ ಅತ್ಯಾಚಾರಗೈದ ಆರೋಪ: ಆರೋಪಿಯ ಬಂಧನ

Update: 2020-07-16 17:59 GMT

ಮೂಡುಬಿದಿರೆ, ಜು.16: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾವೆಸಗಿದ ಆರೋಪದಲ್ಲಿ ಮಾರ್ಪಾಡಿಯ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ನಿವಾಸಿ ಆಸಿಫ್ ಬಂಧಿತ ಆರೋಪಿ. ಈತ ವೃತ್ತಿಯಲ್ಲಿ ಮೀನು ವ್ಯಾಪಾರಿ. ಹತ್ತಿರದಲ್ಲಿ ವಾಸ್ತವ್ಯವಿದ್ದ ತಮಿಳು ಮೂಲದ ಕೂಲಿ ಕಾರ್ಮಿಕರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳ ಜತೆ ಈತ ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಮನೆ ಹತ್ತಿರದ ಗುಡ್ಡೆಯಲ್ಲಿ ಅತ್ಯಾಚಾರವೆಸಗಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News