ಮಲೆನಾಡಿನಲ್ಲಿ ಮುಂದುವರಿದ ಧಾರಾಕಾರ ಮಳೆ
Update: 2020-07-17 10:35 IST
ಚಿಕ್ಕಮಗಳೂರು, ಜು.17: ಮಲೆನಾಡಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ರಾತ್ರಿಯಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.
ಕುದುರೆಮುಖ, ಕಳಸ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಲೆನಾಡಿನ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಮೊಟಕುಗೊಂಡಿದೆ