ಕೊರೋನ ಪರೀಕ್ಷೆಯಲ್ಲಿ ಡಬ್ಲ್ಯುಎಚ್‌ಒ ನಿಗದಿಪಡಿಸಿದ ಗುರಿ ತಲುಪಿದ ಕರ್ನಾಟಕ: ಸಚಿವ ಡಾ.ಸುಧಾಕರ್

Update: 2020-07-17 11:12 GMT

ಬೆಂಗಳೂರು, ಜು. 17: `ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‍ಓ) ಪ್ರತಿದಿನ ಪ್ರತಿ ದಶಲಕ್ಷ ಜನಸಂಖ್ಯೆಗೆ ಕನಿಷ್ಟ 140 ಟೆಸ್ಟ್ ಮಾಡಬೇಕೆಂದು ಶಿಫಾರಸ್ಸು ಮಾಡಿದೆ. ಕರ್ನಾಟಕ 297 ಟೆಸ್ಟ್ ಮಾಡುವ ಮೂಲಕ ಈ ಗುರಿ ತಲುಪಿರುವ ಭಾರತ ದೇಶದ ಪ್ರಮುಖ ಹತ್ತು ರಾಜ್ಯಗಳ ಪೈಕಿ ಕರ್ನಾಟಕವೂ ಸ್ಥಾನ ಪಡೆದಿದೆ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಶುಕ್ರವಾರ ಟ್ವೀಟ್ ಮಾಡಿರುವ ಅವರು, `ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರ ಮಧ್ಯೆಯೇ ಈ ವರೆಗೂ ರಾಜ್ಯದಲ್ಲಿ 9.25 ಲಕ್ಷಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದ್ದು, ಅವೆಲ್ಲವೂ ನಿಖರ ವರದಿ ನೀಡುವ ಆರ್‍ಟಿ-ಪಿಸಿಆರ್ ಟೆಸ್ಟ್ ಆಗಿವೆ' ಎಂದು ವಿವರ ನೀಡಿದ್ದಾರೆ.

ನವಜಾತ ಶಿಶುಗಳಿಗೂ ಕೋವಿಡ್ ನೆಗಟಿವ್: `ಮಕ್ಕಳಿಗೆ ಸೋಂಕು ತಗಲದಂತೆ ಎಚ್ಚರ ವಹಿಸಿ ಈವರೆಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ 350 ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಯರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಪ್ರಕರಣಗಳನ್ನು ಹೊರತುಪಡಿಸಿ ಎಲ್ಲ ನವಜಾತ ಶಿಶುಗಳಿಗೂ ಕೋವಿಡ್ ನೆಗಟಿವ್ ಬಂದಿದ್ದು, ತಾಯಂದಿರು-ಶಿಶುಗಳು ಆರೋಗ್ಯವಾಗಿದ್ದಾರೆ' ಎಂದು ತಿಳಿಸಿದ್ದಾರೆ.

ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೋರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೆ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಮಾಡಿಸುವ ಮೂಲಕ ಇನ್ನೊಂದು ವಿಶೇಷ ಮೈಲುಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೋರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲ ವೈದ್ಯರು ಮತ್ತು ಸಿಬ್ಬಂದಿಗೆ ಅಭಿನಂದನೆಗಳು' ಎಂದು ಡಾ.ಸುಧಾಕರ್ ಶುಭಾ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News