×
Ad

ಅಮೆರಿಕದಲ್ಲಿ ಗರಿಷ್ಠ ಸಂಖ್ಯೆಯ ಕೋವಿಡ್-19 ಪರೀಕ್ಷೆ

Update: 2020-07-17 15:14 IST

ವಾಶಿಂಗ್ಟನ್, ಜು. 17: ಅಮೆರಿಕದ ಬಳಿಕ, ಅತಿ ಹೆಚ್ಚು ಕೊರೋನ ವೈರಸ್ ಪರೀಕ್ಷೆಗಳನ್ನು ನಡೆಸಿದ ದೇಶ ಭಾರತವಾಗಿದೆ ಎಂದು ಅಮೆರಿಕದ ಅಧ್ಯಕ್ಷೀಯ ಕಚೇರಿ ಶ್ವೇತಭವನ ಹೇಳಿದೆ. ಅಮೆರಿಕ ದಾಖಲೆಯ 4.2 ಕೋಟಿ ಪರೀಕ್ಷೆಗಳನ್ನು ನಡೆಸಿದರೆ, ಭಾರತವು 1.2 ಕೋಟಿ ಪರೀಕ್ಷೆಗಳನ್ನು ನಡೆಸಿದೆ ಎಂದು ಅದು ತಿಳಿಸಿದೆ.

ಅಮೆರಿಕದಲ್ಲಿ 35 ಲಕ್ಷಕ್ಕೂ ಅಧಿಕ ಮಂದಿ ಕೊರೋನ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಹಾಗೂ ಸುಮಾರು 1.38 ಲಕ್ಷ ಮಂದಿ ಈ ರೋಗದಿಂದಾಗಿ ಮೃತಪಟ್ಟಿದ್ದಾರೆ. ಜಾಗತಿಕವಾಗಿ, 1.36 ಕೋಟಿಗೂ ಅಧಿಕ ಮಂದಿಯಲ್ಲಿ ಕೊರೋನ ವೈರಸ್ ಸೋಂಕು ಕಾಣಿಸಿಕೊಂಡಿದೆ ಹಾಗೂ 5.86 ಲಕ್ಷಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ.
‘‘ಪರೀಕ್ಷೆಯ ವಿಷಯದಲ್ಲಿ ಇತರ ಯಾವುದೇ ದೇಶಕ್ಕಿಂತ ಹೆಚ್ಚಿನದನ್ನು ನಾವು ಮಾಡಿದ್ದೇವೆ. 4.2 ಕೋಟಿ ಪರೀಕ್ಷೆಗಳು. ಅದರಲ್ಲಿ ಯಾವುದೇ ಸಂಶಯವಿಲ್ಲ. ನಮ್ಮ ನಂತರ ಅತಿ ಹೆಚ್ಚು ಪರೀಕ್ಷೆಗಳನ್ನು ನಡೆಸಿದ ಇನ್ನೊಂದು ದೇಶ ಭಾರತವಾಗಿದೆ. ಅದು 1.2 ಕೋಟಿ ಪರೀಕ್ಷೆಗಳನ್ನು ನಡೆಸಿದೆ’’ ಎಂದು ಶ್ವೇತಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕೇಲೀ ಮೆಕೆನಾನಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News