ಬೆಂಗಳೂರು: ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಕೊರೋನ ಸೋಂಕಿತೆ

Update: 2020-07-17 11:05 GMT

ಬೆಂಗಳೂರು, ಜು.17: ಕೊರೋನ ಸೋಂಕಿನಿಂದ ಬಳಲುತ್ತಿದ್ದ 60 ವರ್ಷದ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮರಿಯಪ್ಪನಪಾಳ್ಯ ನಿವಾಸಿಯಾಗಿದ್ದ ಮಹಿಳೆಯನ್ನು ಏಳು ದಿನಗಳ ಹಿಂದೆಷ್ಟೇ ಈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆ ಖಿನ್ನತೆಗೆ ಒಳಗಾಗಿದ್ದು, ಶುಕ್ರವಾರ ಮುಂಜಾನೆ ಆಸ್ಪತ್ರೆಯಲ್ಲಿರುವ ಸ್ನಾನದ ಕೊಠಡಿಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕಳೆದ ಎರಡು ವಾರದ ಹಿಂದೆ ಇದೇ ರೀತಿ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದರು. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಇದು ಎರಡನೆ ಪ್ರಕರಣವಾಗಿದೆ. ಈ ಸಂಬಂಧ ಉತ್ತರ ವಿಭಾಗದ ಮಲ್ಲೇಶ್ವರಂ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News