ದ.ಕ.ಜಿಲ್ಲೆಗೆ 25,000 ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್: ಡಿಸಿಎಂ ಅಶ್ವಥ್ ನಾರಾಯಣ

Update: 2020-07-17 12:06 GMT

ಮಂಗಳೂರು, ಜು.17: ರಾಜ್ಯ ಸರಕಾರದಿಂದ ಕೋವಿಡ್ 19 ಉಚಿತ ತಪಾಸಣೆಗೆ ದಕ್ಷಿಣ ಕನ್ನಡ ಜಿಲ್ಲೆಗೆ 25,000 ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್‌ಗಳನ್ನು ಕೂಡಲೇ ಜಿಲ್ಲೆಗೆ ಸರಬರಾಜು ಮಾಲಾಗುವುದು ಹಾಗು 15 ಆಂಬುಲೆನ್ಸ್ ಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣ ಕುರಿತು, ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವ ಸಲುವಾಗಿ ವಿಕಾಸಸೌಧದಲ್ಲಿ ಇಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗಿನ ತುರ್ತು ಸಭೆಯ ಬಳಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಯು.ಟಿ.ಖಾದರ್ ಹಾೂ ಜಿಲ್ಲೆಯ ಆರೋಗ್ಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು ಈ ಭರವಸೆ ನೀಡಿದ್ದಾರೆ.

ಕೋವಿಡ್-19 ಸೋಂಕಿತರು, ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ ಕೂಡಲೇ, ಅಗತ್ಯವಿದ್ದಲ್ಲಿ ಸಮೀಪದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು ಹಾಗೂ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದ್ದಾರೆ.

ಇನ್ನು ಮುಂದೆ ಕೋವಿಡ್ -19 ಚಿಕಿತ್ಸೆಗೆ ಒಳಪಡುವವರು ಮತ್ತು ಕೋವಿಡ್ -19 ಟೆಸ್ಟ್ ಮಾಡಿಕೊಳ್ಳಬೇಕಾದವರು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದ ಉಪ ಮುಖ್ಯಮಂತ್ರಿಗಳು, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯ ಪ್ರವೃತ್ತರಾಗಲು ಜಿಲ್ಲಾಧಿಕಾರಿಗೆ ಆದೇಶ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News