×
Ad

ಎಂಎಸ್‍ಎಂಇಗಳಿಗೆ ವಿನಾಯಿತಿ ನೀಡಲು ತಕ್ಷಣ ಕ್ರಮ ಕೈಗೊಳ್ಳಿ: ಕುಮಾರಸ್ವಾಮಿ ಆಗ್ರಹ

Update: 2020-07-17 17:15 IST

ಬೆಂಗಳೂರು, ಜು. 17: ಕೊರೋನ ಸೋಂಕು ಹಬ್ಬಿದ ನಂತರ ಲಾಕ್‍ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. ಎಂಎಸ್‍ಎಂಇಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ, ರಾಜ್ಯ ಸರಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ. ರಾಜ್ಯ ಸರಕಾರ ಎಂಎಸ್‍ಎಂಇಗಳಿಗೆ ಕೇಂದ್ರ ಸರಕಾರದ ಮಾದರಿಯಲ್ಲಿ ವಿನಾಯಿತಿ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, `ರಾಜ್ಯದಲ್ಲಿ ಸುಮಾರು 6 ಲಕ್ಷಕ್ಕೂ ಹೆಚ್ಚುಮಂದಿ ಎಂಎಸ್‍ಎಂಇ ಉದ್ದಿಮೆದಾರರು ನೋಂದಾಯಿಸಿಕೊಂಡಿದ್ದು, ಇದರಲ್ಲಿ ಶೇಕಡ ಅರ್ಧಕ್ಕಿಂತ ಹೆಚ್ಚು ಬೆಂಗಳೂರಿನ ಉದ್ಯಮಿಗಳು. ರಾಜ್ಯ ಸರಕಾರದ ಬಿಡ್‍ನಲ್ಲಿ ಭಾಗವಹಿಸಲು ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರಿಗೆ ಮುಂಗಡ ಹಣ ಪಾವತಿ ಕಡ್ಡಾಯ ಮಾಡಿರುವುದನ್ನು ರದ್ದುಗೊಳಿಸಬೇಕು' ಎಂದು ಇದೇ ವೇಳೆ ಆಗ್ರಹಿಸಿದ್ದಾರೆ.

ರಾಜ್ಯ ಸರಕಾರ ಕೇಂದ್ರದ ರೀತಿ ಸಣ್ಣ, ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ ಎಂಎಸ್‍ಎಂಇ ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ. ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯ ಸರಕಾರ ತಡ ಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News