×
Ad

ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚುವರಿ 300 ಆಕ್ಸಿಜನ್ ಬೆಡ್: ಶಾಸಕ ವೇದವ್ಯಾಸ್ ಕಾಮತ್

Update: 2020-07-17 17:38 IST

ಮಂಗಳೂರು,ಜು.17: ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 300 ಆಕ್ಸಿಜನ್‌ಯುಕ್ತ ಬೆಡ್ ಹಾಗೂ ತಾಲೂಕು ಆಸ್ಪತ್ರೆಗಳಿಗೆ 30 ಬೆಡ್‌ಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶುಕ್ರವಾರ ನಡೆದ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರೊಂದಿಗಿನ ವಿಡಿಯೋ ಕಾನ್ಫರೆನ್ಸ್ ಸಂವಾದದ ನಂತರ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್‌ಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 300 ಹಾಗೂ ಪ್ರತಿ ತಾಲೂಕು ಆಸ್ಪತ್ರೆಗಳಿಗೆ 30 ಬೆಡ್, ಸಮುದಾಯ ಭವನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೆಡ್‌ಗಳಿಗೂ ಆಕ್ಸಿಜನ್ ಸಂಪರ್ಕ ಕಲ್ಪಿಸಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ 150 ಆಕ್ಸಿಜನ್ ಬೆಡ್‌ಗಳು ಲಭ್ಯವಿದೆ. ಹೆಚ್ಚುವರಿ 300 ಬೆಡ್‌ಗಳಿಗೆ ಆಕ್ಸಿಜನ್ ಸಂಪರ್ಕ ಜೋಡಿಸುವ ಪ್ರಕ್ರಿಯೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಆಕ್ಸಿಜನ್ ಬೆಡ್ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಉಪ ಮುಖ್ಯಮಂತ್ರಿಯ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಹರೀಶ್ ಪೂಂಜ, ಜಿಲ್ಲಾಧಿಾರಿ ಸಿಂಧೂ ಬಿ.ರೂಪೇಶ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News