×
Ad

ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ: ಮಾತುಕತೆ ಮೂಲಕ ಬಿಕ್ಕಟ್ಟು ಪರಿಹರಿಸಲು ಕುಮಾರಸ್ವಾಮಿ ಒತ್ತಾಯ

Update: 2020-07-17 18:14 IST

ಬೆಂಗಳೂರು, ಜು. 17: `ವೇತನ ತಾರತಮ್ಯ ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯದ 2 ಸಾವಿರ ಸರಕಾರಿ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಅವರೊಂದಿಗೆ ಮಾತುಕತೆ ನಡೆಸಿ ಬಿಕ್ಕಟ್ಟು ಪರಿಹರಿಸುವಂತೆ ಒತ್ತಾಯಿಸುತ್ತೇನೆ' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕೊರೋನ ಸೋಂಕು ನಿಯಂತ್ರಣ ಮತ್ತು ಚಿಕಿತ್ಸೆಗೆ ಆಯುಷ್ ವೈದ್ಯರಿಗೆ ಮಾಸಿಕ 20ಸಾವಿರ ರೂಪಾಯಿಗಳು. ಆಲೋಪತಿ ವೈದ್ಯರಿಗೆ ಮಾಸಿಕ 60 ಸಾವಿರ ರೂ.ವೇತನ ನೀಡುತ್ತಿರುವುದು ತಾರತಮ್ಯ ಎಂದು ಆಯುಷ್ ವೈದ್ಯರು ರಾಜಿನಾಮೆ ನೀಡಿದ್ದಾರೆ. ಈಗಾಗಲೇ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಕೊರತೆ ಎದುರಿಸುತ್ತಿರುವ ರಾಜ್ಯ ಸರಕಾರ ಆಯುಷ್ ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮನವೊಲಿಸಬೇಕು' ಎಂದು ಸಲಹೆ ಮಾಡಿದ್ದಾರೆ.

ಯಾವುದೇ ಕಾರಣಕ್ಕೂ ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಸರಕಾರ ಹೊಣೆ ಗೇಡಿತನ ಪ್ರದರ್ಶಿಸಬಾರದು. ಅಲೋಪತಿ ಮತ್ತು ಆಯುಷ್ ವೈದ್ಯರ ನಡುವಣ ಅಜಗಜಾಂತರ ವೇತನ ತಾರತಮ್ಯ ಸಹಜವಾಗಿಯೇ ಕಂದಕ ಸೃಷ್ಟಿಸಿದೆ. ಸರಕಾರ ಕೂಡಲೇ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕರೋನ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಬಲು ಕಷ್ಟವಾಗುತ್ತದೆ. ಸಮಸ್ಯೆ ಬಿಗಡಾಯಿಸುವ ಮುನ್ನ ಸರಕಾರ ಎಚ್ಚರ ವಹಿಸಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News