ಪಿಯು ಫಲಿತಾಂಶ: ಮಿತ್ತೂರು ಕೆಜಿಎನ್ ವಿದ್ಯಾರ್ಥಿಗಳ ಉತ್ತಮ ಸಾಧನೆ

Update: 2020-07-17 14:04 GMT

ಬಂಟ್ವಾಳ, ಜು.17: ಇತ್ತೀಚಿಗೆ ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಮಿತ್ತೂರಿನ ಖ್ವಾಜಾ ಗರೀಬ್ ನವಾಝ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 

ವಿಜ್ಞಾನ ವಿಭಾಗದಲ್ಲಿ ರಾಫಿ ಚೆನ್ನಾರ್ 543 (90.5%) ಅಂಕವನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅಶ್ರಫ್ ನಾವೂರು 553(92%), ರಾಶಿದ್ ಮೇನಾಲ 553(92%) ಹಾಗೂ ಶಾಹುಲ್ ಹಮೀದ್ ಸಕಲೇಶಪುರ 511 (85%) ಅಂಕದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಮೆಚ್ಚುಗೆ ವ್ಯಕ್ತಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News