×
Ad

ಅಡ್ಯಾರ್ ಕೊಲೆ ಪ್ರಕರಣದ ಆರೋಪಿಗಳಿಗೂ ಕೊರೋನ ಪಾಸಿಟಿವ್

Update: 2020-07-17 21:58 IST

ಮಂಗಳೂರು, ಜು.17: ನಗರದ ಹೊರವಲಯದ ಅಡ್ಯಾರ್‌ನಲ್ಲಿ ಇತ್ತೀಚೆಗೆ ನಡೆದಿದ್ದ ಗ್ರಾಪಂ ಸದಸ್ಯರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಮೂವರು ಆರೋಪಿಗಳಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ.

ಪ್ರಕರಣ ದಾಖಲಿಸಿದ್ದ ಮಂಗಳೂರು ಗ್ರಾಮಾಂತರ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಕೊರೋನ ಪರೀಕ್ಷೆಗೆ ಗಂಟಲ ದ್ರವ ಕಳುಹಿಸಿಕೊಡಲಾಗಿತ್ತು. ಆ ವರದಿಯು ಶುಕ್ರವಾರ ಬಂದಿದ್ದು, ಬಂಧಿತ ಮೂವರು ಆರೋಪಿಗಳಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ.

ಆರೋಪಿಗಳನ್ನು ಬಂಧನ ಪ್ರಕ್ರಿಯೆಗೆ ಒಳಪಡಿಸಿದ್ದ ಪೊಲೀಸರಿಗೂ ಕೊರೋನ ಸೋಂಕು ತಗುಲಿರುವ ಸಾಧ್ಯತೆ ಇದೆ. ಸೋಂಕಿತ ಆರೋಪಿಗಳನ್ನು ವಿಚಾರಣೆ ನಡೆಸಿದ್ದ ಎಲ್ಲ ಪೊಲೀಸರ ಗಂಟಲು ದ್ರವ ಮಾದರಿಯನ್ನು ಶನಿವಾರ ಸಂಗ್ರಹಿಸಿ ವೆನ್ಲಾಕ್‌ಗೆ ರವಾನಿಸಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಗ್ರಾಮಾಂತರ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News