ನಟ ಸುಶಾಂತ್ ರಜಪೂತ್ ಸಾವಿನ ಸಿಬಿಐ ತನಿಖೆ ಅಗತ್ಯ ಇಲ್ಲ: ಮಹಾರಾಷ್ಟ್ರ ಸಚಿವ

Update: 2020-07-17 17:42 GMT

ಮುಂಬೈ, ಜು. 17: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈ ಪೊಲೀಸರು ಸಮರ್ಥರು ಎಂದು ಹೇಳಿರುವ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಕೋರಿಕೆಯನ್ನು ತಿರಸ್ಕರಿಸಿದ್ದಾರೆ. 

34ರ ಹರೆಯದ ಸುಶಾಂತ್ ಸಿಂಗ್ ರಜಪೂತ್ ಮೃತದೇಹ ಮುಂಬೈಯಲ್ಲಿರುವ ಅವರ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
‘‘ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯ ಇಲ್ಲ. ಈ ಪ್ರಕರಣದ ತನಿಖೆಯನ್ನು ಸರಿಯಾದ ರೀತಿಯಲ್ಲಿ ನಡೆಸಲು ನಮ್ಮ ಪೊಲೀಸ್ ಅಧಿಕಾರಿಗಳು ಸಮರ್ಥರು. ವ್ಯವಹಾರದ ಪೈಪೋಟಿ ಈ ಸಾವಿಗೆ ಕಾರಣವೇ ಎಂಬ ದಿಶೆಯಲ್ಲಿ ಕೂಡ ನಾವು ತನಿಖೆ ನಡೆಸುತ್ತಿದ್ದೇವೆ’’ ಎಂದು ದೇಶಮುಖ್ ಹೇಳಿದ್ದಾರೆ. 
ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಆದೇಶಿಸುವಂತೆ ರಜಪೂತ್ ಅವರ ಆಪ್ತ ಗೆಳತಿ ರಿಯಾ ಚಕ್ರವರ್ತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಮನವಿ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News