ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಜು.21ರವರೆಗೆ ಬೆಂಗಳೂರು ವಿವಿಗೆ ರಜೆ

Update: 2020-07-17 18:21 GMT

ಬೆಂಗಳೂರು, ಜು.17: ಬೆಂಗಳೂರು ನಗರದಲ್ಲಿ ಕೋವಿಡ್-19 ದಿನೇ ದಿನೇ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.21ರವರೆಗೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ರಜೆ ಘೋಷಿಸಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಅಭಿಯಂತರರ ವಿಭಾಗ, ಆರೋಗ್ಯ ಕೇಂದ್ರ ಹಾಗೂ ಭದ್ರತಾ ವಿಭಾಗವನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ಕಚೇರಿಗಳು, ವಿಭಾಗಗಳು, ಘಟಕ ಕಾಲೇಜುಗಳಾದ ಯುವಿಸಿಇ, ವಿಶ್ವವಿದ್ಯಾಲಯದ ಕಾನೂನು ಕಾಲೇಜು ಮತ್ತು ಯುಸಿಪಿಇಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಂವಿವಿ ಕುಲಪತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News