ಕೊಣಾಜೆ: ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡಿದ ಪೊಲೀಸ್ ಸಿಬ್ಬಂದಿ

Update: 2020-07-18 05:51 GMT

ಮಂಗಳೂರು: ಫಿಟ್ಸ್ ಕಾಯಿಲೆಯಿಂದ ನೆಲದ ಮೇಲೆ ಹೊರಳಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಕೊಣಾಜೆ ಪೊಲೀಸ್ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಘಟನೆ ಕೊಣಾಜೆಯ ಬೆಲ್ಮ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ಇಂದು ನಡೆದಿದೆ.

ಬೆಲ್ಮ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದ ತಮಿಳುನಾಡು ಮೂಲದ ಜೋಸೆಫ್ ಎಂಬವರು ನೆಲದ ಮೇಲೆ ಬಿದ್ದು ಹೊರಳಾಡುತ್ತಿದ್ದರು ಎನ್ನಲಾಗಿದೆ. ಇದನ್ನು ಕಂಡ ಕೊಣಾಜೆ ಪೊಲೀಸ್ ಠಾಣೆಯ ರೌಂಡ್ಸ್ ಕರ್ತವ್ಯದಲ್ಲಿದ್ದ ಸಿಬ್ಬಂದಿ ಜಗನ್ನಾಥ್ ಮತ್ತು ಲಕ್ಷ್ಮಣ ಅವರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಈ ವೇಳೆ ನೆರವಿಗೆ ಧಾವಿಸಿದ ಶಾರುಕ್, ಗಣೇಶ್ ಮುಂತಾದವರು ಸೇರಿ ಅವರನ್ನು ಉಪಚರಿಸಿದರು.

ಲಾಕ್​ಡೌನ್ ಸಮಯದಲ್ಲಿ ಆಸ್ಪತ್ರೆಯ ಸಿಬ್ಬಂದಿಯೇ ಚಿಕಿತ್ಸೆಗೆ ಹಿಂದೇಟು ಹಾಕುತ್ತಿರುವ ಸಮಯದಲ್ಲಿ ಸೂಕ್ತ ಸಮಯದಲ್ಲಿ ಉಪಚರಿಸಿದ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News